Politics

*ಠಾಣೆಯಲ್ಲಿ ಆರೋಪಿ ಸಾವು ಕೇಸ್ ಗೆ ಸ್ಪಷ್ಟನೆ ನೀಡಿದ ಸಿಎಂ; ಪೊಲೀಸ್ ಅಧಿಕಾರಿಗಳ ಸಸ್ಪೆಂಡ್ ಗೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಆತ ಪಿಟ್ಸ್ ನಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Home add -Advt

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚನ್ನಗಿರಿಯಲ್ಲಿ ನಡೆದಿರುವುದು ಲಾಕಪ್ ಡೆತ್ ಅಲ್ಲ. ಆತನಿಗೆ ಮೂರ್ಛೆ ರೋಗವಿತ್ತು. ಮೋರ್ಛೆ ರೋಗದಿಂದ ಮೃತಪಟ್ಟಿದ್ದಾನೆ. ಠಾಣೆಯಲ್ಲಿ ಮೂರ್ಛೆ ಹೋಗುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆತ ಪಿಟ್ಸ್ ನಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ ಎಂದರು.

ಆದರೂ ಪ್ರಕರಣದ ತನಿಖೆ ಮಾಡಲಾಗುವುದು. ಆರೋಪಿ ಮೂರ್ಛೆ ರೋಗದಿಂದ ಸಾವನ್ನಪ್ಪಿದ್ದಾನೆ. ಆದರೆ ಎಫ್ಐಆರ್ ಇಲ್ಲದೇ ಪೊಲೀಸರು ಠಾಣೆಗೆ ಕರೆತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

Related Articles

Back to top button