ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ, ದಾಂಧಲೆ ಕೇಸ್ ಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಚನ್ನಗಿರಿ ಡಿವೈಎಸ್ ಪಿ ಪ್ರಶಾಂತ್, ಸರ್ಕಲ್ ಇನ್ಸ್ ಪೆಕ್ಟರ್ ಬಿ.ನಿರಂಜನ ಹಾಗೂ ಎಸ್ ಐ ಅಖ್ತರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಡಾ.ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.
ಮೇ 24ರಂದು ಚನ್ನಗಿರಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಆದಿಲ್ ಎಂಬಾತ ಸಾವನ್ನಪ್ಪಿದ್ದ. ಇದು ಲಾಕಪ್ ಡೆತ್ ಎಂದು ಆರೋಪಿಸಿ ವ್ಯಕ್ತಿಯ ಸಂಬಂಧಿಕರು ಠಾಣೆಯ ಮೇಲೆ ದಾಳಿ ನಡೆಸಿ ಕಲ್ಲುತೂರಾಟ ನಡೆಸಿದ್ದರು. ಹಲವು ಪೊಲೀಸ್ ವಾಹನಗಳನ್ನು ಜಖಂ ಗೊಳಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಎಫ್ಐಆರ್ ಇಲ್ಲದೇ ವ್ಯಕ್ತಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದು ತಪ್ಪು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಇನ್ನು ಚನ್ನಗಿರಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಸರ್ಕಾರ ಆದೇಶ ನೀಡಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ