ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯಲ್ಲಿ ಲಾಕಪ್ ಡೆತ್, ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿದೆ.
ಈ ಕುರಿತು ದಾವಣಗೆರೆ ಎಸ್ ಪಿ ಉಮಾ ಪ್ರಶಾಂತ್, ಮಾಹಿತಿ ನೀಡಿದ್ದು, ಚನ್ನಗಿರಿ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಶೀಘ್ರದಲ್ಲಿಯೇ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಲಿದ್ದಾರೆ ಎಂದು ತಿಳಿಸಿದರು.
ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಆದಿಲ್ ಎಂಬಾತ ಠಾಣೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಪ್ರಕರಣದ ಬೆನಲ್ಲೇ ಇದು ಪಾಕಪ್ ಡೆತ್ ಎಂದು ಆರೋಪಿಸಿ ಆದಿಲ್ ಸಂಬಂಧಿಕರು ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ್ದರು. ಮೇ 24ರಂದು ತಡರಾತ್ರಿ ಠಾಣೆಗೆ ನುಗ್ಗಿದ ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಗಳನ್ನು ಜಖಂಗೊಳಿಸಿದ್ದರು. ಕಲ್ಲು ತೂರಾಟದಲ್ಲಿ 11 ಪೊಲೀಸರು ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಇದೀಗ 23 ಆರೋಪಿಗಳನ್ನು ಬಂಧಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದರ ಬೆನ್ನಲ್ಲೇ ಚನ್ನಗಿರಿ ಠಾಣೆಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ