Cancer Hospital 2
Beereshwara 36
LaxmiTai 5

*ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ; 23 ಆರೋಪಿಗಳ ಬಂಧನ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Emergency Service

ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಆದಿಲ್ ಎಂಬಾತ ಠಾಣೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಪ್ರಕರಣದ ಬೆನಲ್ಲೇ ಇದು ಲಾಕಪ್ ಡೆತ್ ಎಂದು ಆರೋಪಿಸಿ ಆದಿಲ್ ಸಂಬಂಧಿಕರು ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ್ದರು. ಮೇ 24ರಂದು ತಡರಾತ್ರಿ ಠಾಣೆಗೆ ನುಗ್ಗಿದ ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಗಳನ್ನು ಜಖಂಗೊಳಿಸಿದ್ದರು. ಕಲ್ಲು ತೂರಾಟದಲ್ಲಿ 11 ಪೊಲೀಸರು ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಇದೀಗ 23 ಆರೋಪಿಗಳನ್ನು ಬಂಧಿಸಲಾಗಿದೆ.

ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣದಲ್ಲಿ 40 ಜನರನ್ನು ವಶಕ್ಕೆ ಪಡೆಯಲಾಗಿದೆ. ಇನ್ನಷ್ಟು ಜನರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Bottom Add3
Bottom Ad 2