ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾದಿಂದಾಗಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿದ್ದಪ್ಪ ಓ. ಹಲಸಗಿ (53) ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೂ ಸೋಂಕು ತಗುಲಿರುವುದಾಗಿ ಗೊತ್ತಾಗಿದೆ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಕುರಿತು ಪ್ರಗತಿವಾಹಿನಿ ಈ ಹಿಂದೆಯೇ ವರದಿ ಪ್ರಕಟಿಸಿತ್ತು.
ಹಲವು ದಶಕಗಳ ಸುದೀರ್ಘ ಶೈಕ್ಷಣಿಕ ಜೀವನದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದ ಸಿದ್ದಪ್ಪ ಓ. ಹಲಸಗಿ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ತಮ್ಮ ವೃತ್ತಿಯನ್ನು ಪ್ರಾರಂಭಿಸಿದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಎನ್ಎಸ್ಎಸ್ ವಿಭಾಗ ಅಧ್ಯಕ್ಷರಾಗಿದ್ದರು ಹಾಗೂ ಎರಡು ವರ್ಷಗಳ ಕಾಲ ಸಂಗೊಳ್ಳಿ ರಾಯಣ್ಣ ಸರ್ಕಾರಿ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು.
ಈವರೆಗೆ ಸುಮಾರು 45ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ ಹಾಗೂ 20 ಟೆಕ್ಸ್ಟ್ ಬುಕ್ ಗಳನ್ನು ಬರೆದಿದ್ದಾರೆ. ಹೆಂಡತಿ, ಒಬ್ಬ ಮಗ, ಒಬ್ಬಳು ಮಗಳು ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಪ್ರಗತಿವಾಹಿನಿ ಈ ಹಿಂದೆ ಪ್ರಕಟಿಸಿದ್ದ ವರದಿ ಓದಿ –
ಆರ್ ಸಿಯುದಲ್ಲಿ 10ಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು: ಆದರೂ ಸೀಲ್ ಡೌನ್ ಇಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ