Election News

*ಚನ್ನಪಟ್ಟಣ ಉಪಚುನಾವಣೆ: ಎನ್ ಡಿಎ ಅಭ್ಯರ್ಥಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣ ಉಪಚುನಾವಣೆ ಹಿನ್ನೆಯಲ್ಲಿ ಕೊನೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಕೊನೆಗೂ ತಮ್ಮ ಅಭ್ಯರ್ಥಿ ಹೆಸರು ಘೋಷಿಸಿದ್ದಾರೆ. ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿಯನ್ನು ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಭೆ ಬಳಿಕ ನಿಖಿಲ್ ಹೆಸರನ್ನು ಫೈನಲ್ ಮಾಡಲಾಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮರಸ್ವಾಮಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷದ ನಾಯಕರು ಒಮ್ಮತದಿಂದ ಈ ನಿರ್ಧಾರ ಮಾಡಿದ್ದಾಗಿ ತಿಳಿಸಿದರು.

Home add -Advt

ನಿಖಿಲ್ ಕುಮಾರಸ್ವಾಮಿ ನೂರಕ್ಕೆ ನೂರರಷ್ಟು ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ. ಬಿಜೆಪಿ-ಜೆಡಿಎಸ್ ನಾಯಕರೆಲ್ಲರೂ ಸೇರಿ ನಿಖಿಲ್ ಅವರನ್ನು ಗೆಲ್ಲಿಸುತ್ತೇವೆ ಎಂದು ಹೇಳಿದರು.

Related Articles

Back to top button