
ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣ ಉಪಚುನಾವಣೆ ಎನ್ ಡಿಎ ಅಭ್ಯರ್ಥಿ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಬಿ.ಎಸ್.ಯಡಿಯೂರಪ್ಪ, ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಅವರು ಯಾರು ಬೇಕೋ ಅವರಿಗೆ ಟಿಕೆಟ್ ಘೋಷಣೆ ಮಾಡಲಿ ಎಂದು ಹೇಳಿದರು.
ಈ ಬಗ್ಗೆ ಅಮಿತ್ ಶಾ ಕೂಡ ತಿಳಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಿಸಲಿದೆ ಎಂದಿದ್ದಾರೆ. ಈಗಾಗಲೇ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ನಾಯಕರನ್ನು ಕಣಕ್ಕಿಳಿಸಲಾಗಿದೆ. ಹಾಗಾಗಿ ಚನ್ನಪಟ್ಟಣ ಜೆಡಿಎಸ್ ಕ್ಷೇತ್ರವಾಗಿದ್ದು, ಅವರು ಅಭ್ಯರ್ಥಿ ಘೋಷಿಸಲಿ ಎಂದರು.
ಉಪಚುನಾವಣೆಯ ಮೂರು ಕ್ಷೇತ್ರಗಳಿಗೂ ಬಿಜೆಪಿ-ಜೆಡಿಎಸ್ ಒಗ್ಗಟ್ಟಾಗಿ ಕೆಲಸ ಮಾಡಲಿದೆ. ಮೂರು ಕ್ಷೇತ್ರಗಳನ್ನು ಗೆಲ್ಲುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ