Kannada NewsKarnataka NewsLatestPolitics
*ಮೈತ್ರಿ ಬದಲು ವಿಲೀನ ಮಾಡಿಕೊಳ್ಳಲಿ; ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು; HDKಗೆ ಸಚಿವ ದಿನೇಶ್ ಗುಂಡೂರಾವ್ ಟಾಂಗ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚರವಾಗಿ ಆಹಾರ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದು, ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ನಾವು ಅನೇಕ ಬಾರಿ ಹೇಳಿದ್ದೆವು. ನಮ್ಮ ಮಾತು ಸತ್ಯ ಎಂಬುದನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿರೂಪಿಸಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.
ಜೆಡಿಎಸ್ ಪಕ್ಷಕ್ಕೆ ಯಾವುದೇ ತತ್ವ ಸಿದ್ಧಾಂತಗಳು ಇಲ್ಲ. ಕೋಮುವಾದಿ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್ ಗೆ ಯಾವ ಸಿದ್ಧಾಂತವಿದೆ? ಎಂದು ಪ್ರಶ್ನಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಅದೊಂದು ಅವಕಾಶವಾದಿ ಪಕ್ಷ. ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ ಬಿಜೆಪಿ ಸೇರಿದ್ದಾಗಲೇ ಜಾತ್ಯಾತೀತ ತತ್ವಕ್ಕೆ ಎಳ್ಳುನೀರು ಬಿಟ್ಟಾಯಿತು. ಆಗಲೇ ಜೆಡಿಎಸ್ ನ ಅವನತಿಶುರುವಾಗಿದ್ದು. ಈಗ ಮೈತ್ರಿ ಬದಲು ವಿಲೀನ ಮಾಡಿಕೊಳ್ಳಲಿ . ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು ಎಂದು ವ್ಯಂಗ್ಯವಾಡಿದ್ದಾರೆ.