Kannada NewsKarnataka NewsLatest

ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಸಿದ ಚನ್ನರಾಜ ಹಟ್ಟಿಹೊಳಿ

 

Home add -Advt

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚನ್ನರಾಜ ಹಟ್ಟಿಹೊಳಿ ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಆಗಮಿಸಿದ ಚನ್ನರಾಜ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ್ ಜಾರಕಿಹೊಳಿ, ಶಾಸಕರಾದ ಅಂಜಲಿ ನಿಂಬಾಳಕರ್, ಲಕ್ಷ್ಮಿ ಹೆಬ್ಬಾಳಕರ್, ಗಣೇಸ ಹುಕ್ಕೇರಿ, ಮಹಾಂತೇಶ ಕೌಜಲಗಿ, ಮಾಜಿ ಸಚಿವ ಎ.ಬಿ.ಪಾಟೀಲ, ಮಾಜಿ ಶಾಸಕ ಶಾಮ್ ಘಾಟಗೆ, ಫಿರೋಜ್ ಸೇಠ್, ವಿನಯ ನಾವಲಗಟ್ಟಿ ಸೇರಿದಂತೆ ಹಲವಾರು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನ ಹಾಗೂ ಹಿಡಲಗಾದ ಗಣಪತಿ ಮಂದಿರದಲ್ಲಿ ಪೂಜೆ ಸಲ್ಲಿಸಲಾಯಿತು.

ನಾಮಪತ್ರ ಸಲ್ಲಿಕೆಗೂ ಮುನ್ನ ಮಹಾಲಕ್ಷ್ಮೀ ಸನ್ನಿಧಿಯಲ್ಲಿ ಪ್ರಾರ್ಥನೆ

Related Articles

Back to top button