*ಡಿಸಿಸಿ ಬ್ಯಾಂಕ್ ಚುನಾವಣೆಗೆ ಚನ್ನರಾಜ್ ಹಟ್ಟಿಹೊಳಿ ಸ್ಪರ್ಧೆ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಜಕಾರಣ ಹಾಗೂ ರಾಜಕೀಯ ದೃಷ್ಟಿಯಿಂದ ವಿಧಾನ ಪರಿಷತ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣೆಯ ಸ್ಪರ್ಧೆಯಿಂದ ಹಿಂದೆಸರಿಯಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಮನವೊಲಿಕೆ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಕಣದಿಂದ ಚನ್ನರಾಜ ಹಿಂದಕ್ಕೆ ಸರಿದಿದ್ದಾರೆ. ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ಕಳೆದ ನಾಲ್ಕೈದು ತಿಂಗಳಿಂದ ಚನ್ನರಾಜ ತಯಾರಿ ನಡೆಸಿದ್ದರು. ಖಾನಾಪುರ ತಾಲೂಕಿನಿಂದ ಚನ್ನರಾಜ್ ಹಟ್ಟಿಹೊಳಿ ಕಣಕ್ಕಿಳಿಯಲು ತಯಾರಿ ನಡೆಸಿದ್ದರು. ಖಾನಾಪುರದ ಪಿಕೆಪಿಎಸ್ ನಿರ್ದೇಶಕರ ಮನ ಗೆಲ್ಲಲು ಚನ್ನರಾಜ್ ಯಶಸ್ವಿಯಾಗಿದ್ದರು. ಜಿಲ್ಲೆಯ ರಾಜಕಾರಣ ಹಾಗೂ ರಾಜಕೀಯ ದೃಷ್ಟಿಯಿಂದ ಚನ್ನರಾಜ್ ಸ್ಪರ್ಧೆಯಿಂದ ಹಿಂಪಡೆಯಲಿದ್ದಾರೆ. ಚುನಾವಣೆ ಕಣದಿಂದ ಚನ್ನರಾಜ್ ಹಿಂದೆ ಸರಿದಿದ್ದೇಕೆ ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುವೆ ಎಂದು ಈ ಬಗ್ಗೆ ಅಧಿಕೃತವಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಈ ಹೇಳಿಕೆಯಿಂದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಮಿಂಚಿನ ಬೆಳವಣಿಗೆ ಆಗಿದ್ದು, ನಿರ್ದೇಶಕ ಸ್ಥಾನದ ಚುನಾವಣಾ ಕಣದಿಂದ ಸಚಿವೆ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಹಿಂದೆ ಸರಿದಿದ್ದಾರೆ. ಮುಂದೆ ಈ ವಿಚಾರ ಯಾವ ತಿರುವು ಪಡೆದುಕೊಳ್ಳುತ್ತೆ ಎಂದು ಕಾದು ನೋಡಬೇಕು.