
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ ನ ಚನ್ನರಾಜ ಹಟ್ಟಿಹೊಳಿ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಮಾಣ ವಚನ ಬೋಧಿಸಲಿದ್ದಾರೆ.
ಡಿಸೆಂಬರ್ 10ರಂದು ನಡೆದ ಚುನಾವಣೆಯಲ್ಲಿ ಚನ್ನರಾಜ ಹಟ್ಟಿಹೊಳಿ ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಸ್ಥಾನದಿಂದ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ.
ಹಾಲಿ ಸದಸ್ಯರಾದ ಬಿಜೆಪಿಯ ಮಹಾಂತೇಶ ಕವಟಗಿಮಠ ಹಾಗೂ ಪಕ್ಷೇತರ ವಿವೇಕರಾವ್ ಪಾಟೀಲ ಅವರ ಅವಧಿ ಬುಧವಾರ ಮುಕ್ತಾಯವಾಗಿದೆ.
ಚನ್ನರಾಜ ಹಟ್ಟಿಹೊಳಿ ಮತ್ತು ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿರುವ ಲಖನ್ ಜಾರಕಿಹೊಳಿ ಸೇರಿದಂತೆ 25 ನೂತನ ಸದಸ್ಯರು ಗುರುವಾರವೇ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಪರಿಷತ್ ಚುನಾವಣೆ ಗೆಲುವು: ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ