ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ಮುಖಂಡ, ಉದ್ಯಮಿ ಚನ್ನರಾಜ ಹಟ್ಟಿಹೊಳಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಗ್ಗೆ 5.30ಕ್ಕೆ ಸುಳೇಬಾವಿಯ ಮಹಾಲಕ್ಷ್ಮಿ ದೇವಾಲಯದಲ್ಲಿ ಹಾಗೂ 7 ಗಂಟೆಗೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಅವರು ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಸಿಪಿಎಡ್ ಮೈದಾನದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಅಭಿಮಾನಿಗಳು ಸೇರಲಿದ್ದು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರುಗಳಾದ ಅಂಜಲಿ ನಿಂಬಾಳಕರ್, ಮಹಾಂತೇಶ ಕೌಜಲಗಿ, ಗಣೇಶ ಹುಕ್ಕೇರಿ, ಲಕ್ಷ್ಮಿ ಹೆಬ್ಬಾಳಕರ್, ಮುಖಂಡರಾದ ಎ.ಬಿ.ಪಾಟೀಲ, ಪ್ರಕಾಶ ಹುಕ್ಕೇರಿ, ಅಶೋಕ ಪಟ್ಟಣ, ಶಾಮ್ ಘಾಟಗೆ, ಕಾಕಾಸಾಹೇಬ ಪಾಟೀಲ, ಫಿರೋಜ್ ಸೇಠ್, ವಿನಯ ನಾವಲಗಟ್ಟಿ, ರಾಜು ಸೇಠ್, ಸುನೀಲ ಹನಮಣ್ಣವರ್, ರಾಜು ಕಾಗೆ, ವೀರಕುಮಾರ ಪಾಟೀಲ, ಯುವರಾಜ ಕದಂ, ಮಹಾವೀರ ಮೋಹಿತೆ, ಗಜಾನನ ಮಂಗಸೂಳಿ, ವಿಶ್ವಾಸ ವೈದ್ಯ, ಅಡಿವೇಶ ಇಟಗಿ, ಬಸವರಾಜ ಮ್ಯಾಗೋಟಿ, ಮಹಾಂತೇಶ ಮತ್ತಿಕೊಪ್ಪ ಸೇರಿದಂತೆ ಎಲ್ಲ ಪ್ರಮುಖರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಾಜರಿರಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ