Belagavi NewsBelgaum NewsKannada NewsKarnataka NewsLatest

*ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಚನ್ನರಾಜ ಹಟ್ಟಿಹೊಳಿ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿಯವರು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳಿಂದ ಸೋಮವಾರ ಸಂಜೆ ಪ್ರಮಾಣಪತ್ರ ಸ್ವೀಕರಿಸಿದರು.

ಅವಿರೋಧವಾಗಿ ಆಯ್ಕೆಯಾದ ಇತರ 8 ನಿರ್ದೇಶಕರು ಸಹ ಪ್ರಮಾಣಪತ್ರ ಸ್ವೀಕರಿಸಿದರು.

ಗಣೇಶ ಹುಕ್ಕೇರಿ, ವಿಶ್ವಾಸ ವೈದ್ಯ, ಅರವಿಂದ ಪಾಟೀಲ, ರಾಹುಲ್ ಜಾರಕಿಹೊಳಿ, ಅಮರನಾಥ ಜಾರಕಿಹೊಳಿ, ಬಸವರಾಜ ಕಪ್ಪಲಗುದ್ದಿ, ರಾಜು ಕಾಗೆ, ಮಾಮನಿ ಸಹ ಸೋಮವಾರ ಪ್ರಮಾಣ ಪತ್ರ ಸ್ವೀಕರಿಸಿದರು.

ಈ ವೇಳೆ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ ಹಾಗೂ ಅವಿರೋಧವಾಗಿ ಆಯ್ಕೆಯಾದ ಎಲ್ಲ ನಿರ್ದೇಶಕರು ಇದ್ದರು.

Home add -Advt


Related Articles

Back to top button