
ಪ್ರಗತಿವಾಹಿನಿ ಸುದ್ದಿ: ಖಾನಾಪುರ: ಚಿಕ್ಕಹಟ್ಟಿಹೊಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಸಾಮಾನ್ಯ ಮತಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೋಮವಾರ ಈ ಆಯ್ಕೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಹಿತೈಷಿಗಳು ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಅವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಪಿಕೆಪಿಎಸ್ ಚುನಾವಣೆಯ ಫಲಿತಾಂಶದಿಂದ ನನ್ನ ಹೆಗಲಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ಸೇರಿದೆ. ಕಾಯಾ-ವಾಚಾ-ಮನಸಾ ಸಹಕಾರ ಸಂಘದ ಮೂಲಕ ಮತ್ತಷ್ಟು ಜನರ ಸೇವೆಯಲ್ಲಿ ತೊಡಗಿಕೊಳ್ಳುವ ಸಂಕಲ್ಪ ಮಾಡಿದ್ದೇನೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ.