Belagavi NewsBelgaum NewsKannada NewsKarnataka News

*ವಿಕೇಂದ್ರೀಕರಣ ವ್ಯವಸ್ಥೆಗೆ ಬಲ ತುಂಬುವ ಕೆಲಸ ಮಾಡೋಣ : ಚನ್ನರಾಜ ಹಟ್ಟಿಹೊಳಿ*

ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬೆಳಗಾವಿ, ತಾಲೂಕಾ ಪಂಚಾಯತ್ ಖಾನಾಪುರ ಹಾಗೂ ಗ್ರಾಮ ಪಂಚಾಯತ್ ಇಟಗಿ ಇವರ ಸಂಯುಕ್ತ ಆಶ್ರಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಇಟಗಿಯ ನೂತನ ಕಟ್ಟಡ ಹಾಗೂ ಸಭಾ ಭವನವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಉದ್ಘಾಟಿಸಿದರು.

ಸರಕಾರದಿಂದ ಬಿಡುಗಡೆಯಾಗುವ ಹಣ ಮಧ್ಯವರ್ತಿಗಳಿಲ್ಲದೆ ನೇರವಾಗಿ ಗ್ರಾಮ ಪಂಚಾಯಿತಿಗೆ ತಲುಪಿದಾಗ ಯಾವುದೇ ಯೋಜನೆ ಯಶಸ್ವಿಯಾಗುತ್ತದೆ. ಗ್ರಾಮ ಪಂಚಾಯಿತಿಗಳು ವಿಕೇಂದ್ರೀಕರಣ ವ್ಯವಸ್ಥೆಯ ಅತ್ಯಂತ ಪ್ರಮುಖ ಹಂತವಾಗಿದ್ದು, ಇದಕ್ಕೆ ಬಲತುಂಬಿದಾಗ ಪ್ರಜಾಪ್ರಭುತ್ವ ಅರ್ಥಪೂರ್ಣವಾಗುತ್ತದೆ. ಯಾವುದೇ ಊರಿನ ಶಾಲೆ ಮತ್ತು ಪಂಚಾಯಿತಿ ಸ್ಥಿತಿ ಗತಿ ನೋಡಿದರೆ ಆ ಊರಿನ ಸ್ಥಿತಿ ಗೊತ್ತಾಗುತ್ತದೆ. ಹಾಗಾಗಿ ಇವೆರಡನ್ನು ಉತ್ತಮಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ. ಎಲ್ಲರೂ ಸೇರಿ ಗ್ರಾಮದ ಅಭಿವೃದ್ಧಿ ಮಾಡೋಣ, ಒಳ್ಳೆಯ ಸಮಾಜ ನಿರ್ಮಾಣ ಮಾಡೋಣ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.

Home add -Advt

ಕಾರ್ಯಕ್ರಮದಲ್ಲಿ ಚನ್ನಮ್ಮನ ಕಿತ್ತೂರು ವಿರಕ್ತಮಠದ ಪರಮಪೂಜ್ಯ ಶ್ರೀ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು, ನಂದಗಡ ಹಾಗೂ ಇಟಗಿ ವಿರಕ್ತಮಠದ ಶ್ರೀ ಚನ್ನವೀರ ದೇವರು, ಅವರೊಳ್ಳಿ ಬಿಳಕಿಯ ರುದ್ರಸ್ವಾಮಿ ಮಠದ ಶ್ರೀ ಚನ್ನಬಸವ ದೇವರು, ಶಾಸಕರಾದ ವಿಠ್ಠಲ ಹಲಗೇಕರ್, ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಮೇಶ ಮೇತ್ರಿ, ವಿಜಯಕುಮಾರ್ ಕೋತಿನ, ರೂಪಾಲಿ ಬಡಕುಂದ್ರಿ, ವಿರೇಶ ಸಜ್ಜನ, ರೋಹಿಣಿ ಬಾ ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುದ್ರಪ್ಪ ತುರಮುರಿ, ಉಪಾಧ್ಯಕ್ಷರಾದ ರಾಜಶ್ರೀ ಹುಣಶೀಕಟ್ಟಿ ಹಾಗೂ ಸರ್ವ ಸದಸ್ಯರು, ಗ್ರಾಮದ ಗುರು ಹಿರಿಯರು, ಸುತ್ತಮುತ್ತಲಿನ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Related Articles

Back to top button