*ಪಂತಬಾಳೇಕುಂದ್ರಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಪಂತ ಬಾಳೇಕುಂದ್ರಿ ಗ್ರಾಮದ ಪರಮಾನಂದ ನಗರದ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಭಾನುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. 57.70 ಲಕ್ಷ ರೂ,ಗಳ‌ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣಗೊಳ್ಳಲಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳನ್ನು ತರುತ್ತಿದ್ದಾರೆ. ಮೂಲಭೂತ ಸೌಲಭ್ಯಗಳ ಜೊತೆಗೆ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಕ್ಷೇತ್ರಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು. … Continue reading *ಪಂತಬಾಳೇಕುಂದ್ರಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ*