Politics

*ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ಕೈಗೊಳ್ಳತ್ತಿರುವ ಹಿನ್ನೆಲೆಯಲ್ಲಿ ಇಂದು ಸಿ.ಪಿ.ಎಡ್ ಮೈದಾನದಲ್ಲಿನ ಪೂರ್ವ ಸಿದ್ಧತೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಮುಖಂಡರು ಪರಿಶೀಲನೆ ನಡೆಸಿದರು.

Home add -Advt

ಬಸವ ಜಯಂತಿ ಪೂರ್ವಭಾವಿ ಸಭೆ

ಮೇ 04 ರಂದು ನಡೆಯಲಿರುವ ಬಸವ ಜಯಂತಿಯ ಮೆರವಣಿಗೆ ಹಿನ್ನೆಲೆಯಲ್ಲಿ ಬೆಳಗಾವಿಯ ಎಸ್.ಜಿ.ಬಾಳೇಕುಂದ್ರಿ ಸಭಾಭವನದಲ್ಲಿ ಶನಿವಾರ
ನಡೆದ ಪೂರ್ವಭಾವಿ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ, ಮಾತನಾಡಿದರು.

ಈ ವೇಳೆ ಶ್ರೀ ಅಲ್ಲಮಪ್ರಭು ಮಹಾಸ್ವಾಮಿಗಳು,‌ ಮಾಜಿ ಸಚಿವರಾದ ಎ.ಬಿ.ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ್, ಈರಣ್ಣ ದೇಯಣ್ಣವರ, ಬಸವರಾಜ ರೊಟ್ಟಿ, ಅಶೋಕ ಮಳಗಲಿ, ಶಂಕರ ಗುಡಸ, ಕಿರಣ ಅಗಡಿ, ರತ್ನಪ್ರಭ ಬೆಲ್ಲದ, ಸೂರ್ಯಕಾಂತ ಭಾವಿ ಹಾಗೂ ಸಮಾಜದ ಅನೇಕ ಮುಖಂಡರು ಉಪಸ್ಥಿತರಿದ್ದರು.

Related Articles

Back to top button