Belagavi NewsBelgaum NewsKarnataka NewsPolitics

*ಜಗಜ್ಯೋತಿ ಬಸವೇಶ್ವರ ಜಯಂತಿ: ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ‌ ಮಾಡಿದ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಮಹಾನ್ ಮಾನವತಾವಾದಿ, ಜಗಜ್ಯೋತಿ, ಕ್ರಾಂತಿಯೋಗಿ ಶ್ರೀ ಬಸವೇಶ್ವರ ಜಯಂತಿಯ ಪ್ರಯುಕ್ತವಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಿರೇಬಾಗೇವಾಡಿಯ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ‌ ಮಾಡಿ, ಗೌರವ ಸಲ್ಲಿಸಿದರು.

‘ಅನುಭವ ಮಂಟಪ’ದ ಮೂಲಕ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ನೀಡಿ, ಜಾತಿ ವ್ಯವಸ್ಥೆ, ಸಾಮಾಜಿಕ ತಾರತಮ್ಯ, ಶೋಷಣೆ, ಮೂಢನಂಬಿಕೆಯ‌ ವಿರುದ್ಧ ಸಮರ ಸಾರಿದ ಬಸವಣ್ಣನವರ ತತ್ವಾದರ್ಶಗಳು ಸದಾಕಾಲವೂ ಸ್ಮರಣೀಯ ಎಂದು ಅವರು ತಿಳಿಸಿದ್ದಾರೆ.

Home add -Advt

Related Articles

Back to top button