Belagavi NewsBelgaum NewsKarnataka NewsPolitics
*ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತಿಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಈ ವೇಳೆ ಶಾಸಕರಾದ ಆಸಿಫ್ ಸೇಠ್, ಮಾಜಿ ಶಾಸಕರಾದ ಶ್ಯಾಮ್ ಘಾಟಗೆ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಮುಂತಾದವರು ಉಪಸ್ಥಿತರಿದ್ದರು.




