Kannada NewsKarnataka NewsLatestPolitics

*ಸಿಎಂ ಗಮನಕ್ಕೆ ತರುವ ಭರವಸೆ ನೀಡಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸದಸ್ಯರ ಅಹವಾಲುಗಳನ್ನು ಆಲಿಸಿದರು.

​ಪ್ರಸ್ತುತ ಚಾಲ್ತಿಯಲ್ಲಿರುವ ಆಡಳಿತ ಸಮಿತಿಯನ್ನು ಮುಂದುವರಿಸುವಂತೆ ಆಗ್ರಹಿಸಿ ಸದಸ್ಯರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಗ್ರಾಮ ಪಂಚಾಯತ್ ಸದಸ್ಯರ ನ್ಯಾಯಯುತ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆದು, ಸೂಕ್ತ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.


ವಿಧಾನ ಪರಿಷತ್ ನಲ್ಲಿ ವಿಷಯ ಪ್ರಸ್ತಾಪಿಸಿ, ಸಚಿವರ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಚನ್ನರಾಜ ಹೇಳಿದರು.

Home add -Advt

​ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಭೀಮರಾವ್ ಪಾಟೀಲ, ಕೇಶವ್ ಪ್ರಸಾದ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಚಲುವಾದಿ ನಾರಾಯಣಸ್ವಾಮಿ, ಪ್ರತಿಭಟನೆ ನಿರತ ಸದಸ್ಯರು ಉಪಸ್ಥಿತರಿದ್ದರು.

Related Articles

Back to top button