Belagavi NewsBelgaum NewsKarnataka NewsPolitics

*ಹಂತ ಹಂತವಾಗಿ ಅಭಿವೃದ್ಧಿಯತ್ತ ಬೆಳಗಾವಿ ಗ್ರಾಮೀಣ ಕ್ಷೇತ್ರ : ಚನ್ನರಾಜ ಹಟ್ಟಿಹೊಳಿ*

ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು, ಕ್ಷೇತ್ರದಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಶೈಕ್ಷಣಿಕ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಬೇಕು ಎನ್ನುವ ಸಂಕಲ್ಪ ಮತ್ತು ಭರವಸೆಯನ್ನು ಈಡೇರಿಸುವ ದಿಸೆಯಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ದಿಸೆಯಲ್ಲಿ ಇಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭದ ಮೂಲಕ ಮತ್ತೊಂದು ಹೆಜ್ಜೆ ಇಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

Home add -Advt

ಕ್ಷೇತ್ರದಲ್ಲಿ 2 ಕಡೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಆರಂಭಿಸುವ ಮೂಲಕ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಮತ್ತು ಭವಿಷ್ಯದ ಪೀಳಿಗೆಯನ್ನು ಶೈಕ್ಷಣಿಕವಾಗಿ ಸಬಲೀಕರಣಗೊಳಿಸಬೇಕೆನ್ನುವ ನಮ್ಮ ಬದ್ಧತೆಯತ್ತ ಹೆಜ್ಜೆ ಹಾಕುತ್ತಿದ್ದೇವೆ. ಶಾಲೆ ಬಿಡುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಬೇಕು ಎನ್ನುವ ಸದುದ್ದೇಶದಿಂದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯನ್ನು ಆರಂಭಿಸಲಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ವರ್ಗಗಳ ಮಕ್ಕಳೂ ಸಹ ಉತ್ತಮ ಶಿಕ್ಷಣವನ್ನು ಪಡೆಯಬೇಕೆನ್ನುವ ಉದ್ದೇಶ ಇದರ ಹಿಂದಿದೆ ಎಂದು ಅವರು ತಿಲಿಸಿದರು.

ವಿದ್ಯಾರ್ಥಿಗಳನ್ನು ಜ್ಞಾನ, ಕೌಶಲ್ಯ ಮತ್ತು ವ್ಯಕ್ತಿತ್ವದ ಮೂಲಕ ಸಜ್ಜುಗೊಳಿಸಿ, ಜವಾಬ್ದಾರಿಯುತ ನಾಗರಿಕರನ್ನಾಗಿ ಬೆಳೆಸುವ ಗುರಿ ಮತ್ತು ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಶೈಕ್ಷಣಿಕ ಶ್ರೇಷ್ಠತೆ, ಸೃಜನಶೀಲತೆ ಮತ್ತು ಸಮಗ್ರ ಅಭಿವೃದ್ಧಿಯ ಕಲಿಕಾ ವಾತಾವರಣವನ್ನು ಸೃಷ್ಟಿಸುವುದು ನಮ್ಮ ಗುರಿಯಾಗಿದೆ. ಆ ದಿಸೆಯಲ್ಲಿ ಈ ವರ್ಷ ನಮ್ಮ ಗ್ರಾಮೀಣ ಕ್ಷೇತ್ರದಲ್ಲಿ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಹಿರೇಬಾಗೇವಾಡಿಗೆ ಕಳೆದ 7 ವರ್ಷದಲ್ಲಿ ಸಾಕಷ್ಟು ಯೋಜನೆಗಳನ್ನು ತರಲಾಗಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವುದರಿಂದ ಬೆಳೆಯಲು ಸಾಕಷ್ಟು ಅವಕಾಶವಿದೆ. ತಾಲೂಕು ಕೇಂದ್ರದ ರೀತಿಯಲ್ಲಿ ಹಿರೇಬಾಗೇವಾಡಿ ಬೆಳೆಯಬೇಕೆನ್ನುವುದು ನಮ್ಮ ಉದ್ದೇಶ. ಹಾಗಾಗಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಉದ್ದೇಶಿಸಲಾಗಿದೆ. ಯಾವುದೇ ಒಂದು ವ್ಯವಸ್ಥೆ ನಿಂತ ನೀರಾಗಲು ಸಾಧ್ಯವಿಲ್ಲ, ಹಂತಹಂತವಾಗಿ ಬೆಳೆಯಲೇಬೇಕಾಗುತ್ತದೆ. ಹಾಗೆ ಬೆಳೆಯುವುದರಿಂದ ಜನರಿಗೆ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ, ವ್ಯಾಪಾರ- ವ್ಯವಹಾರಗಳು ಗಣನೀಯವಾಗಿ ಬೆಳೆಯುತ್ತವೆ, ಭೂಮಿಯ ದರ ಹೆಚ್ಚಾಗುತ್ತದೆ, ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳು ಸಿಗುತ್ತವೆ. ಸರಕಾರದ ಹೆಚ್ಚಿನ ಅನುದಾನವನ್ನು ತರಬಹುದು, ತನ್ಮೂಲಕ ಜನರ ಜೀವನಮಟ್ಟ ಸುಧಾರಣೆಯಾಗುತ್ತವೆ. ಈ ಎಲ್ಲ ಉದ್ದೇಶದಿಂದ ಈ ಭಾಗದ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡೇ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸುವ ನಿರ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಅಶ್ರಫ್ ಪೀರ್ ಖಾದ್ರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಸಿ.ಪಾಟೀಲ, ಸುರೇಶ ಇಟಗಿ, ಮಹಮ್ಮದ್ ಅಲಿ ಕರಿದಾವಲ್, ಅಡಿವೇಶ ಇಟಗಿ, ಶ್ರೀಕಾಂತ ಮಾಧುಭರಮಣ್ಣವರ, ಜಯಶ್ರೀ ಜಪ್ತಿ, ಬಿ‌.ಎನ್.ಪಾಟೀಲ, ಗೌಸಮೊದ್ದಿನ್ ಜಾಲಿಕೊಪ್ಪ, ಪ್ರಕಾಶ ಜಪ್ತಿ, ವಾಯ್.ಎಲ್.ಪಾಟೀಲ, ಎನ್.ಎಫ್.ಕಂಠಿ, ಖತಾಲ್ ಗೋವೆ, ನಿಂಗಪ್ಪ ತಳವಾರ, ಬಿ.ಜಿ.ವಾಲಿಇಟಗಿ, ಮನ್ಸೂರ್ ಅತ್ತಾರ್, ರಾಜು ಪಾಟೀಲ, ಸುತ್ತಮುತ್ತಲಿನ ಗ್ರಾಮಗಳ ಮುಖಂಡರು, ಅಲ್ಪಸಂಖ್ಯಾತರ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

Back to top button