Belagavi NewsBelgaum NewsKarnataka NewsLatest

*ಕೆರೆ ಅಭಿವೃದ್ಧಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

​ಸುಮಾರು 1.27 ಕೋಟಿ ವೆಚ್ಚದಲ್ಲಿ ಈ ಕೆರೆಯ ಕಾಯಕಲ್ಪ ನಡೆಯಲಿದ್ದು, ಪ್ರಮುಖವಾಗಿ ಸ್ಟೋನ್ ಪಿಚಿಂಗ್ ಹಾಗೂ ಕಾಲುವೆ (ಕ್ಯಾನಲ್) ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮೂಲಕ ಗ್ರಾಮದ ಜಲಮೂಲವನ್ನು ಸಂರಕ್ಷಿಸಿ, ರೈತರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಗುರಿಯಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.

​ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt

Related Articles

Back to top button