
ಪ್ರಗತಿವಾಹಿನಿ ಸುದ್ದಿ; ಧಾರವಾಡ: ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಧಾರವಾಡ ಎಸ್ ಡಿಎಂ ಆಸ್ಪತ್ರೆ ವೈದ್ಯರು ಕಣವಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.
ಕಣವಿ ಅವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದೆ. ಎದೆ ಭಾಗದಲ್ಲಿ ಸೋಂಕು ಹರಡಿದೆ. ಕಣವಿ ಅವರ ಶ್ವಾಸಕೋಶ ಉಸಿರಾಟದ ಶಕ್ತಿ ಕಳೆದುಕೊಳ್ಳುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.
ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ ನಿಂದ ಬಳಲುತ್ತಿರುವ ಚನ್ನವೀರ ಕಣವಿ ಅವರು ಕಳೆದ 2 ವಾರದಿಂದ ಎಸ್ ಡಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಣವಿ ಅವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆಗೆ ಕಾರಣವೇನು?; 9 ತಿಂಗಳ ಮಗುವನ್ನು ಬಿಟ್ಟು ಹೊಗುವಂತಾದ್ದೇನಾಯಿತು?