Politics

*ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಚರಂತಿಮಠ*

ಪ್ರಗತಿವಾಹಿನಿ ಸುದ್ದಿ: ಬ್ಯಾಂಕ್ ಸಾಲ ಮರುಪಾವತಿ ಮಾಡದ ಹಿನ್ನಲೆ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾಧ್ಯಕ್ಷ ಆನಂದ ಮುತ್ತಗಿ ಮೇಲೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಈ ಪ್ರಕರಣ ಸಂಬಂದ ಚರಂತಿಮಠ ಸೇರಿದಂತೆ ನಾಲ್ವರ ವಿರುದ್ಧ ಬಾಗಲಕೋಟೆ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚರಂತಿಮಠ ಬೀಳೂರು ಗುರುಬಸವ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದು, ಇದೇ ಸಹಕಾರ ಸಂಘದಿಂದ ಆನಂದ ಮುತ್ತಗಿ 35 ಲಕ್ಷ ರೂ. ಸಾಲ ಮಾಡಿದ್ದರು. ಆದರೆ 2018 ರಿಂದಲೂ ಅವರು ಸಾಲವನ್ನು ಮರುಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದ್ದರು. ಈ ಹಿನ್ನೆಲೆ ರೊಚ್ಚಿಗೆದ್ದ ಚರಂತಿಮಠ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ಆನಂದ ಮುತ್ತಗಿ ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಡೆದಿರುವ ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಆನಂದ ಮುತ್ತಗಿ, ನನಗೆ ಉದ್ಯಮದಲ್ಲಿ ನಷ್ಟವಾಗಿದ್ದರಿಂದ 35 ಲಕ್ಷ ರೂ. ಸಾಲ ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಜಮೀನು ಮಾರಾಟ ಮಾಡಿ ಸಾಲದ ಹಣ ಹಿಂದಿರುಗಿಸಲು ನಿರ್ಧರಿಸಿದ್ದೆ. ಆದರೆ ಸಹಕಾರ ಸಂಘದ ಸಿಬ್ಬಂದಿ ನನ್ನನ್ನು ಬಸವೇಶ್ವರ ಶಿಕ್ಷಣ ಸಂಸ್ಥೆ ಸಂಘದ ಕಚೇರಿಗೆ ಕರೆದುಕೊಂಡು ಹೋಗಿ, ಅಲ್ಲಿ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ಹಿಂಸಿಸಿ ಹಲ್ಲೆ ಮಾಡಿದ್ದರು ಎಂದು ಹೇಳಿದ್ದಾರೆ.

ನನ್ನ ಮೇಲೆ ಹಲ್ಲೆ ನಡೆಸಿದ ವೀರಣ್ಣ ಚರಂತಿಮಠ ಸೇರಿದಂತೆ ನಾಲ್ವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ನನಗೆ ಹಾಗೂ ನನ್ನ ಕುಟುಂಬದವರಿಗೆ ಏನಾದರೂ ಆದರೆ ಚರಂತಿಮಠ ಕಾರಣ ಎಂದು ಅವರು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button