ಪ್ರಗತಿವಾಹಿನಿ ಸುದ್ದಿ; ಡೆಹ್ರಾಡೂನ್: ಚಾರ್ ಧಾಮ್ ಯಾತ್ರೆಗೆ ತೆರಳಿದ್ದ 39 ಯಾತ್ರಿಕರಲ್ಲಿ ಬಹುತೇಕರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಉತ್ತರಾಖಂಡ ಆರೋಗ್ಯ ಇಲಾಖೆ ತಿಳಿಸಿದೆ.
ಚಾರ್ ಧಾಮ್ ಯಾತ್ರೆಯಲ್ಲಿ ಈವರೆಗೆ 39 ಯಾತ್ರಿಗಳು ಸಾವನ್ನಪ್ಪಿದ್ದು, ರಕ್ತದೊತ್ತಡ, ಹೃದಯ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪ್ರತಿವರ್ಷದಂತೆ ಈ ಬಾರಿಯೂ ಸಾವಿರಾರು ಜನರು ಚಾರ್ ಧಾಮ್ ಯಾತ್ರೆಗೆ ತೆರಳಿದ್ದಾರೆ. ಮೇ 3 ರಿಂದ ಆರಂಭವಾಗಿರುವ ಚಾರ್ ಧಾಮ್ ಯಾತ್ರೆತ್ರೆಯಲ್ಲಿ 39 ಜನ ಮೃತಪಟ್ಟಿದ್ದಾರೆ. ಹೃದಯಾಘಾತಕ್ಕೊಳಗಾಗಿ ಹಲವರು ಸಾವನ್ನಪ್ಪಿರುವುದು ಉಳಿದ ಯಾತ್ರಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಅನಾರೋಗ್ಯವಿದ್ದರೆ ಜನರು ಪ್ರಯಾಣಿಸದಂತೆ ಉತ್ತರಾಖಂಡ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೇದಾರನಾಥ, ಬದ್ರಿನಾಥ, ಗಂಗೋತ್ರಿ, ಯಮುನೋತ್ರಿ ನಾಲ್ಕು ಯಾತ್ರಾಸ್ಥಳಗಳಾದ ಚಾರ್ ಧಾಮ್ ಯಾತ್ರೆ ಸಮುದ್ರ ಮಟ್ಟದಿಂದ 10-12 ಸಾವಿರ ಎತ್ತರ ಹಿನ್ನಲೆಯಲ್ಲಿ ಬಹುತೇಕ ಯಾತ್ರಾರ್ಥಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿದೆ. .
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ