National

*ಚಾರ್ ಧಾಮ್ ಯಾತ್ರೆಗೆ ಹೆಲಿಕಾಪ್ಟರ್ ಸೇವೆ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿರುವ ಹಿನ್ನೆಲೆಯಲ್ಲಿ ಉತ್ತರಾಅಖಂದದ ಕೇದಾರನಾಥ ಧಾಮ್ ಗೆ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಚಾರ್ ಧಾಮ್ ಯಾತ್ರೆಗೂ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಂಡಿದೆ.

ಚಾರ್ ಧಾಮ್ ಯಾತ್ರೆಗೆ ಹೆಲಿಕಪಟರ್ ಸೇವೆ ಸ್ಥಗಿತಗೊಳಿಸಿ ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ. ತಕ್ಷಣದಿಂದ ಆದೇಶ ಜಾರಿಗೆ ಬರುವಂತೆ ಸೂಚಿಸಿದೆ.

Home add -Advt

ಸದ್ಯ ಯಾತ್ರಿಕರನ್ನು ಸ್ಥಳಾಂತರಿಸಲು ಮಾತ್ರ ಹೆಲಿಕಾಪ್ಟರ್ ಸೇವೆ ಲಭ್ಯವಿದೆ. ಮುಂದಿನ ಆದೇಶದವರೆಗೆ ಚಾರ್ ಧಾಮ್ ಯಾತ್ರೆಗೆ ಹೆಲಿಕಾಪ್ಟರ್ ಸೇವೆ ಲಭ್ಯವಿರುವುದಿಲ್ಲ ಎಂದು ತಿಳಿದುಬಂದಿದೆ.

Related Articles

Back to top button