Kannada NewsLatest

ಬೆಳಗಾವಿ: ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಳೆದ ಮೂರು ದಿನಗಳಿಂದ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ, ಇದೀಗ ಘಟಪ್ರಭಾ ನದಿಯಲ್ಲಿ ಹೆಣವಾಗಿ ಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಗೋಕಾಕ ತಾಲುಕಿನ ಅರಭಾವಿಯ ಸಾವಿತ್ರಿ (30), ಮಕ್ಕಳಾದ ನಾಲ್ಕು ವರ್ಷದ ಪೂಜಾ ಹಾಗೂ ಎರಡು ವರ್ಷದ ಲಕ್ಷ್ಮೀ ಮೃತರು. ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ಮೂರು ದಿನಗಳ ಹಿಂದೆ ಮಕ್ಕಳೊಂದಿಗೆ ಮನೆಬಿಟ್ಟು ಹೋಗಿದ್ದಳು. ಎರಡು ದಿನವಾದರೂ ವಾಪಸ್ಸಾಗದ ಹಿನ್ನೆಲೆಯಲ್ಲಿ ಮಹಿಳೆಯ ಪತಿ ಗೋಕಾಕ ಠಾಣೆಗೆ ದೂರು ನೀಡಿದ್ದರು. ಇದೀಗ ಮಹಿಳೆ ಹಾಗೂ ಇಬ್ಬರು ಮಕ್ಕಳ ಶವ ಘಟಪ್ರಭಾ ನದಿಯಲ್ಲಿ ಪತ್ತೆಯಾಗಿದೆ.

Home add -Advt

ಪತಿ ಪತ್ನಿಯ ನಡುವೆ ಜಗಳವಾಗಿದ್ದು, ಇದರಿಂದ ನೊಂದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

Related Articles

Back to top button