Belagavi NewsBelgaum NewsKannada NewsKarnataka News
*ಬಾಲ್ಯ ವಿವಾಹ: ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಪ್ರಾಪ್ತ ಬಾಲಕಿಯ ಮದುವೆ ವಿಚಾರದಲ್ಲಿ ಐಪಿಎಸ್ ಅಧಿಕಾರಿ ರವೀಂದ್ರ ಗಡಾದಿ ವಿರುದ್ಧ ಕೋರ್ಟ್ ನಲ್ಲಿ ಅರೋಪ ಪಟ್ಟಿ ಸಲ್ಲಿಕೆಯಾಗಿದೆ.
ಅಪ್ರಾಪ್ತ ಬಾಲಕಿಗೆ ಮುಂದೆ ನಿಂತು ಮದುವೆ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ವಿಭಾಗದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಗಡಾದಿ ಸೇರಿ ಒಟ್ಟು ಎಂಟು ಜನರ ವಿರುದ್ಧ ಬಾಲ್ಯ ವಿವಾಹ ಮಾಡಿರುವ ಆರೋಪದ ಮೇಲೆ ಚಾರ್ಜ್ ಶೀಟ್ ದಾಖಲಾಗಿದೆ.
ಬಾಲ್ಯ ವಿವಾಹ ಆರೋಪದ ಕುರಿತು ಅಥಣಿ ತಾಲೂಕಿನ ಐಗಿಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾತ್ರವಲ್ಲದೆ ಬಾಲಕಿ ಹಾಗೂ ಆಕೆಯ ಕುಟುಂಬಕ್ಕೆ ಕಿರುಕುಳ ನೀಡುರುವ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.
ಸದ್ಯಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆಯಾಗಿದೆ.