ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಚಾರ್ಮಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅರಣ್ಯ ಪ್ರದೇಶ ರಾತ್ರಿಯಿಡಿ ಹೊತ್ತಿ ಉರಿದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ತಿಗೆಹಾರ ಸಮೀಪದ ಚಾರ್ಮಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಬೆಂಕಿ ಸಂಭವಿಸಿದ್ದು, ಅಪಾರ ಅರಣ್ಯ ಸಂಪತ್ತು ನಾಶವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.
ಬೆಂಕಿ ಅವಘಡಕ್ಕೆ ನಿಖರ ಕಾರನ ತಿಳಿದುಬಂದಿಲ್ಲ.