*ಚಾರ್ಮಡಿ ಘಾಟ್ ನಲ್ಲಿ ಕಾಡ್ಗಿಚ್ಚು; ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ*

ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿವೆ. ಬಿರುಗಳಿಯೂ ಬೀಸುತ್ತಿರುವುದರಿಂದ ಬೆಂಕಿಯ ಕೆನ್ನಾಲಿಗೆ ವೇಗವಾಗಿ ಹಬ್ಬುತ್ತಿದ್ದು, ಕಾಡನ್ನು ಆಪೋಷನ ತೆಗೆದುಕೊಳ್ಳುತ್ತಿದೆ. ಚಾರ್ಮಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಬೀಡುಬಿಟ್ಟಿದ್ದು, ಕಾಡ್ಗಿಚ್ಚು ನಿಯಂತ್ರಿಸಲು ಹರಸಾಹಸಪಡುತ್ತಿದ್ದಾರೆ. *ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬ್ರೇಕ್ ಹಾಕಲು ನಿರ್ಧಾರ: ರಾಜ್ಯದಲ್ಲಿ ಕ್ರೆಡಿಟ್ … Continue reading *ಚಾರ್ಮಡಿ ಘಾಟ್ ನಲ್ಲಿ ಕಾಡ್ಗಿಚ್ಚು; ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ*