Latest

*ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ 11 ಜನರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ರಾಂಚಿ: ಪಿಕಪ್ ವಾಹನ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ 11 ಜನರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ.

ಘಟನೆಯಲ್ಲಿ ಹತ್ತು ಜನರು ಗಾಯಗೊಂಡಿದ್ದಾರೆ. ಬಲೋದ ಬಜಾರ್ – ಭಟಪರಾ ರಸ್ತೆಯ ಭಟಪರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಮಾರಿಯಾ ಗ್ರಾಮದ ಬಳಿ ಗುರುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿ 11 ಜನರು ಸಾವನ್ನಪ್ಪಿದ್ದಾರೆ.

ಮೃತರು ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, 1 ಕೋಟಿ ರೂ. ದಂಡ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button