ಪ್ರಗತಿವಾಹಿನಿ ಸುದ್ದಿ: ಏಪ್ರಿಲ್ 19 ರಂದು ಮೊದಲ ಹಂತದ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯಲಿದ್ದು, ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಛತ್ತೀಸಗಢದ ಬಿಜಾಪುರ ಜಿಲ್ಲೆಯ ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಲೆಂಡ್ರಾ ಗ್ರಾಮದ ಬಳಿಯ ಕಾಡಿನಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸ್ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಜಾಪುರ ರಾಜ್ಯ ರಾಜಧಾನಿ ರಾಯ್‌ಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿದೆ. ನಾಲ್ವರು ನಕ್ಸಲೀಯರ ಮೃತದೇಹಗಳು ಮತ್ತು ಲಘು ಮೆಷಿನ್ ಗನ್ ಮತ್ತಿತರ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ