
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ದ್ವೈ-ವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಈರಣ್ಣ ಕಡಾಡಿ ಹಾಗೂ ಅಶೋಕ ಗಸ್ತಿ, ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ಅವರು ಇಂದು ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರಿಗೆ ಇಲ್ಲಿ ಇಂದು ನಾಮಪತ್ರ ಸಲ್ಲಿಸಿದರು.


ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ತುಂಬುವ ವೇಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಜಲಸಂಪನ್ಮೂಲ ಸಚಿವ ರಮೇಶ್ ಎಲ್ ಜಾರಕಿಹೊಳಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಸಿ.ಟಿ.ರವಿ ಅವರೂ ಈ ಸಂದರ್ಭದಲ್ಲಿ ಹಾಜರಿದ್ದರು.
ದೇವೇಗೌಡರ ಜೊತೆ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಬಂಡೆಪ್ಪ ಕಶೆಂಪುರ, ಎಚ್.ಕೆ.ಕುಮಾರಸ್ವಾಮಿ ಇದ್ದರು.
ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಆಗಮಿಸುವ ವೇಳೆ ಮುಖಂಡರುಗಳಾದ ಡಾ.ಪ್ರಭಾಕರ ಕೋರೆ, ಸುರೇಶ ಅಂಗಡಿ, ಶಂಕರಗೌಡ ಪಾಟೀಲ, ಅಣ್ಣಾಸಾಹೇಬ ಜೊಲ್ಲೆ, ಶಶಿಕಲಾ ಜೊಲ್ಲೆ, ಉಮೇಶ ಕತ್ತಿ, ರಮೇಶ ಕತ್ತಿ, ಮಹಾಂತೇಶ ಕವಟಗಿಮಠ, ಹಲವಾರು ಶಾಸಕರು ಇದ್ದರು.
