![](https://pragativahini.com/wp-content/uploads/2025/01/naxal.jpg)
ಪ್ರಗತಿವಾಹಿನಿ ಸುದ್ದಿ: ಚತ್ತೀಸ್ ಗಢ ಬಿಜಾಪುರ್ ಜಿಲ್ಲೆಯಲ್ಲಿ ಭದ್ರತಾಪಡೆಗಳಿಂದ ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ. ಪೊಲೀಸರು ಹಾಗೂ ಭದ್ರತಾಪಡೆಗಳ ಎನ್ ಕೌಂಟರ್ ನಲ್ಲಿ 31 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಬಿಜಾಪುರ್ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆ ವೇಳೆ 31 ನಕ್ಸಲರನ್ನು ಸದೆಬಡಿಯಲಾಗಿದೆ. ನಕ್ಸಲರು ಹಾಗೂ ಭದ್ರತಾಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಡಗಿರುವ ಕೆಂಪು ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ