*ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ಹೆಸರು ಬಳಸಿ ವಂಚನೆ; ಇಬ್ಬರು ಮಹಿಳೆಯರ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಹೆಸರು ಬಳಿಸಿ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಬೆಂಗಳೂರಿನ ಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುಧಾಮೂರ್ತಿ ಪಿಎ ಮಮತಾ ಸಂಜಯ್ ಎಂಬುವವರು ಶೃತಿ ಹಾಗೂ ಲಾವಣ್ಯ ಎಂಬುವವರ ವಿರುದ್ಧ ಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೆಕೆಎನ್ ಸಿ (ಕನ್ನಡ ಕೂಟ ಆಫ್ ನಾರ್ಥನ್ ಕ್ಯಾಲಿಫೋರ್ನಿಯಾ)ಯಿಂದ 50ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಬರಲು ಸಾಧ್ಯವಿಲ್ಲ ಎಂದು ಸುಧಾಮೂರ್ತಿ ಇಮೇಲ್ ಮೂಲಕ ತಿಳಿಸಿದ್ದರು. ಈ ಮಧ್ಯೆ ಕಿಡಿಗೇಡಿಗಳು ಇದೇ ಸಂದರ್ಭವನ್ನು ಬಳಸಿಕೊಂಡು ಕೆಕೆಎನ್ ಸಿ ಕಾರ್ಯಕ್ರಮಕ್ಕೆ ಸುಧಾಮೂರ್ತಿ ಬರುತ್ತಾರೆ ಎಂದು ಸಾಮಾಜಿಕ ಜಲತಾಣಗಳಲ್ಲಿ ಜಾಹೀರಾತು ನೀಡಿ ಕಾರ್ಯಕ್ರಮಕ್ಕೆ ಟಿಕೆಟ್ ಮಾರಾಟ ಮಾಡಿದ್ದಾರೆ.
ಅಲ್ಲದೇ ಮೂರ್ತಿ ಟ್ರಸ್ಟ್ ನ ಕಚೇರಿ ಎಂದು ಹೆಸರು ಸೃಷ್ಟಿಸಿ ಸುಧಾಮೂರ್ತಿಯವರ ಅಸಿಸ್ಟೆಂಟ್ ಎಂದು ವಂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಯನಗರ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ