ಪ್ರಗತಿವಾಹಿನಿ ಸುದ್ದಿ; ಗೋಕಾಕ್: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಪ್ರತಿಷ್ಠಿತ ಕರ್ನಾಟಕ ಕಾಲೇಜು ಪ್ರಾಚಾರ್ಯ ದುರಗಪ್ಪ ಕರಡೋಣಿ ಅವರಿಗೆ ಬೆಳಗಾವಿ ಜಿಲ್ಲಾ ಗೋಕಾಕ್ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.
ಗೋಕಾಕ್ ನ ವಿಠ್ಠಲ ಅನ್ನುವವರಿಂದ ದುರಗಪ್ಪ ಕರಡೋಣಿ 3 ಲಕ್ಷ ರೂಪಾಯಿ ಹಣ ಪಡೆದಿದ್ದರು. ಹಣ ಹಿಂತಿರುಗಿಸಲು ಕೇಳಿದಾಗ ಚೆಕ್ ನೀಡಿದ್ದಾರೆ. ಆದರೆ ಖಾತೆಯಲ್ಲಿ ಹಣವಿಲ್ಲದ ಕಾರಣ ಚೆಕ್ ಬೌನ್ಸ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಠ್ಠಲ ಗೋಕಾಕ್ ಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಪ್ರಕರಣದ ವಿಚಾರಣೆ ನಡೆಸಿದ ಗೋಕಾಕ್ ಜೆ ಎಂ ಎಫ್ ಸಿ ಕೋರ್ಟ್ ಪ್ರಾಚಾರ್ಯ ಕರಡೋಣಿಗೆ ವಾರೆಂಟ್ ಜಾರಿ ಮಾಡಿದ್ದು, ಏಪ್ರಿಲ್ 22ರಂದು ಹಾಜರುಪಡಿಸುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ