Kannada NewsKarnataka NewsLatest
*BREAKING: ಬೈಕ್ ನಲ್ಲಿ ತೆರಳುತ್ತಿದ್ದ ಸವಾರರ ಮೇಲೆ ಚಿರತೆ ದಾಳಿ: ಕಲ್ಲಿನಿಂದ ಹೊಡೆದು ಚಿರತೆ ಓಡಿಸಿದ ಗ್ರಾಮಸ್ಥರು*

ಪ್ರಗತಿವಾಹಿನಿ ಸುದ್ದಿ: ಮೊಮ್ಮಗನನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ತೆರಳುತ್ತಿದ್ದ ಬೈಕ್ ಸವಾರರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಿದ್ದರಹಳ್ಳಿ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಸವಾರರ ಮೇಲೆ ಏಕಾಎಕಿ ಚಿರತೆ ದಾಳಿ ನಡೆಸಿದೆ. ತಕ್ಷಣ ಗ್ರಾಮಸ್ಥರು ಕಲ್ಲುಗಳಿಂದ ಹೊಡೆದು ಚಿರತೆಯನ್ನು ಓಡಿಸಿ ಬೈಕ್ ಸವಾರರ ಜೀವ ರಕ್ಷಿಸಿದ್ದಾರೆ.
ಚಿರತೆ ದಾಳಿಯಿಂದಾಗಿ ಮಂಜುನಾಥ್ ಹಾಗೂ ಮೂರ್ತಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೊನ್ಮಗನನ್ನು ಶಾಲೆಗೆ ಬಿಡಲು ಕಡೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸಿದ್ದರಹಳ್ಳಿ, ಮದಗದಕೆರೆ, ಎಮ್ಮೆದೊಡ್ಡಿ ಭಾಗಗಳಲ್ಲಿ ಚಿರತೆ ಹಾವಳಿ ಹೆಚ್ಚಿದ್ದು, ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.