ಪ್ರಗತಿವಾಹಿನಿ ಸುದ್ದಿ: ಚಿರತೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಬೆಂಗಳುರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕಂಬಾಳು ಗೊಲ್ಲರಹಟ್ಟಿಬಳಿ ನಡೆದಿದೆ.
ಕರಿಯಮ್ಮ ಮೃತ ಮಹಿಳೆ. ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚುತ್ತಿದ್ದು, ಗ್ರಾಮಸ್ಥರು ಹಲವು ಬಾರಿ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯುವ ನಿಟ್ಟಿನಲ್ಲಿ ಮುಂದಾಗಿರಲಿಲ್ಲ. ಇದೀಗ ಮಹಿಳೆ ಚಿರತೆ ದಾಳಿಗೆ ಬಲಿಯಾಗಿದ್ದು, ಎಸಿ ಎಫ್ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಎಸಿಎಫ್ ನಿಜಾಮುದ್ದೀನ್ ಘಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಗ್ರಾಮಸ್ಥರನ್ನು ಸಮಧಾನಪಡಿಸಿದ ಎಸಿಎಫ್, ಚಿರತೆ ಸೆರೆ ಹಿಡಿಯಲಾಗುವುದು. ಮೃತ ಮಹಿಳೆಯ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ