LatestUncategorized

ವೋಟರ್ ಐಡಿ ಅಕ್ರಮ: ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ರದ್ದು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿಯನ್ನು ಬಿಬಿಎಂಪಿ ರದ್ದುಗೊಳಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆಗೆ ಚಿಲುಮೆ ಎನ್ ಜಿ ಓ ಸಂಸ್ಥೆಗೆ ಅನುಮತಿ ನೀಡಿ ಬಿಬಿಎಂಪಿ ಆದೇಶ ಹೊರಡಿಸಿತ್ತು. ಆದರೆ ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ನಿನ್ನೆಯೇ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ರದ್ದುಗೊಳಿಸಲಾಗಿದೆ ಎಂದು ಬಿಬಿಎಂಪಿ ವಿಶೇಷ ಚುನಾವಣಾ ಆಯುಕ್ತ ರಂಗಪ್ಪ ತಿಳಿಸಿದ್ದಾರೆ.

ಐಡಿ ಕಾರ್ಡ್ ದುರ್ಬಳಕೆ ಮಾಡಿಕೊಂಡಿರುವುದು ಕಂಡುಬಂದಿದೆ. ಮತದಾರರಿಗೆ ಅರಿವು ಮೂಡಿಸುವಂತೆ ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಆದರೆ ಸಂಸ್ಥೆ ಐಡಿ ದುರುಪಯೋಗಪಡಿಸಿಕೊಂಡಿದೆ ಈ ಹಿನ್ನೆಲೆಯಲ್ಲಿ ಸಂಸ್ಥೆಯ ಲೋಕೇಶ್ ಎಂಬುವವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದಿಂದ ಮತದಾರರ ಮಾಹಿತಿ ಕಳ್ಳತನ; ಕಾಂಗ್ರೆಸ್ ಗಂಭೀರ ಆರೋಪ

https://pragati.taskdun.com/voter-id-misusesiddaramaiah-d-k-shivakumarpress-meetbjp-govt/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button