ಅಬುದಾಬಿ: ಐಪಿಎಲ್ 13ನೇ ಅವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ ನಾಯಕ ಧೋನಿ ನಿರ್ಧಾರ ಫಲ ಕೊಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 9 ವಿಕೆಟಿಗೆ 162 ರನ್ ಗಳಿಸಿ ಚೆನ್ನೈ ಸೂಪರ್ ಕಿಂಗ್ಸ್ ಗೆ 163 ರನ್ ಗಳ ಬೃಹತ್ ಸವಾಲೊಡ್ಡಿತ್ತು. ಈ ಸವಾಲಿನ ಮೊತ್ತ ಬೆನ್ನತ್ತಿದ್ದ ಧೋನಿ ಪಡೆ ಡು ಪ್ಲೆಸಿಸ್ ಹಾಗೂ ಅಂಬಾಟಿ ರಾಯಡು ಅವರ ಅಮೋಘ 115 ರನ್ ಗಳ ಜತೆಯಾಟದೊಂದಿಗೆ 19.2 ಓವರ್’ಗಳಲ್ಲಿ ಗೆಲುವು ಸಾಧಿಸಿತು.
ಮಧ್ಯಮ ಕ್ರಮಾಂಕದ ಆಟಗಾರ ಅಂಬಟಿ ರಾಯಡು ಕೇವಲ 48 ಎಸೆತಗಳಲ್ಲಿ 71 ರನ್ ಬಾರಿಸಿ ಮುಂಬೈ ನೀಡಿದ 163 ರನ್ ಗುರಿ ತಲುಪಲು ಕಾರಣರಾದರು.ಟಾಸ್ ಗೆದ್ದು ಮೊದಲು ಸೂಪರ್ ಕಿಂಗ್ಸ್ ತಂಡ ಫೀಲ್ಡಿಂಗ್ ಅಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡಕ್ಕೆ ರೋಹಿತ್-ಕಾಕ್ ಆರಂಭಿಕ ಜೋಡಿಯು ಪವರ್ ಪ್ಲೇಯ 4.4 ಓವರ್ ಗಳಲ್ಲಿ ಮೊದಲ ವಿಕೆಟ್ ಗೆ 44 ರನ್ ಪೇರಿಸಿ ಉತ್ತಮ ಆರಂಭ ನೀಡಿದ್ದರು.
ಆದರೆ ಮಧ್ಯಮ ಕ್ರಮಾಂಕದ ಆಟಗಾರರು ಕೈಕೊಡುವುದರೊಂದಿಗೆ ಮುಂಬೈ ತಂಡ ಅಂತಿಮವಾಗಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 162 ರನ್ ಪೇರಿಸಿ ಸಾಧಾರಣ ಮೊತ್ತಕ್ಕೆ ತೃಪ್ತಿಪಡಬೇಕಾಯಿತು. ಈ ಮೊತ್ತ ಬೆನ್ನತ್ತಿದ ಚೆನ್ನೈ ತಂಡ ಮೊದಲ ಎರಡು ಓವರ್‌ಗಳಲ್ಲಿ ತನ್ನ ಆರಂಭಿಕರಾದ ಶೇನ್ ವಾಟ್ಸನ್ ಮತ್ತು ಮುರಳಿ ವಿಜಯ್ ಅವರನ್ನು 6 ರನ್ನುಗಳಿಗೆ ಕಳೆದುಕೊಂಡರೂ, ರಾಯಡು ಮತ್ತು ಪಾಫ್ ಡುಪ್ಲೆಸಿಸ್ ಬರೋಬ್ಬರಿ ಶತಕದ ಜತೆಯಾಟದ ಮೂಲಕ ಅಂತಿಮವಾಗಿ 5 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ