ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಉತ್ತರ ತಮಿಳುನಾಡು ಹಾಗೂ ರಾಯಲಸೀಮಾ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಕುಂಭದ್ರೋಣ ಮಳೆಗೆ ಚೆನ್ನೈ ಮಹಾನಗರ ತತ್ತರಗೊಂಡಿದೆ.
ನಿನ್ನೆಯಿಂದ ಸುರಿಯುತ್ತಿರುವ ಭೀಕರ ಮಳೆಗೆ ಚೆನ್ನೈ ನ ಬಹುತೇಕ ಅಂಡರ್ ಪಾಸ್ ಗಳು ಮುಳುಗಡೆಯಾಗಿದ್ದು, ನಗರದ ಬಹುತೇಕ ಪ್ರದೇಶ ಜಲಾವೃತಗೊಂಡಿದೆ. 2015ರಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ಭೀತಿ ಮತ್ತೆ ಎದುರಾಗಿದೆ.
ಕೊರಟೂರ್, ಪೆರಂಬೂರ್, ಅಣ್ಣಾ ಸಲೈ, ಪೆರಗುಂಡಿ, ಕಾಂಚಿವರಂ, ಚೆಂಗಲ್ಪಟ್ಟು, ತಿರುವಳ್ಳೂರು, ಸೈದಾಪೇಟ್, ವೆಲ್ಲಚೆರಿ ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಗಿಂಡಿ-ಕೋಯಂಬೆಡು ಮಾರ್ಗ ಸಂಪೂರ್ಣ ಬಂದ್ ಆಗಿದ್ದು, ಹಲವೆಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಚೆನ್ನೈ ನಗರದ ಜನರು ಸುರಕ್ಷಿತ ಪ್ರದೇಶಗಳಲ್ಲಿ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇನ್ನು ಆಂಧ್ರದ ರಾಯಲಸೀಮಾ, ನೆಲ್ಲೂರು ಭಾಗದಲ್ಲಿಯೂ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ಬೆಳೆಗಳು ನೀರುಪಾಲಾಗುವೆ. ನೆಲ್ಲೂರಿನಲ್ಲಿಯೂ ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಿದೆ.
ಇಂದಿನಿಂದ 3 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ