ಮಗಳ ಪತಿಯನ್ನೇ ಹತ್ಯೆ ಗೈದ ತಂದೆ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ಜನರು ಆತಂಕಾಕ್ಕೀಡಾಗಿದ್ದಾರೆ, ಇಲ್ಲೊಬ್ಬ ವ್ಯಕ್ತಿ ತನ್ನ ಮಗಳು ಬೇರೆ ಜಾತಿಯವನನ್ನು ರಹಸ್ಯವಾಗಿ ವಿವಾಹವಾಗಿದ್ದಕ್ಕೆ ಮಗಳ ಪತಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಎಂ.ಸುಧಾಕರ್ ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಗಿಯ ತಂದೆ ಮತ್ತು ಸೋದರ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮೂರ್ತಿ (45) ಮತ್ತು ಕೆ.ಕಥಿರಾವನ್ (26) ಎಂದು ಗುರುತಿಸಲಾಗಿದೆ.

ಮೃತ ಸುಧಾಕರ್ 19 ವರ್ಷದ ಹುಡುಗಿಯನ್ನು ಪ್ರೀತಿಸುತ್ತಿದ್ದನು. ಆರು ತಿಂಗಳ ನಂತರ ಇಬ್ಬರೂ ಮನೆಬಿಟ್ಟು ಓಡಿಹೋಗಿದ್ದು, ವಾಲಜಾಪೇಟೆಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ನಂತರ 10 ದಿನಗಳ ಕಾಲ ಮನೆ ಬಾಡಿಗೆಗೆ ಪಡೆದು ವಾಸ ಮಾಡುತ್ತಿದ್ದರು. ಆದರೆ ಇಬ್ಬರು ತಮ್ಮ ಮದುವೆಯನ್ನು ರಿಜಿಸ್ಟರ್ ಮಾಡಿಸಿರಲಿಲ್ಲ.

ಇತ್ತ ಹುಡುಗಿಯ ಕುಟುಂಬದವರು ಇಬ್ಬರನ್ನು ಪತ್ತೆ ಹಚ್ಚಿದ್ದಾರೆ. ನಂತರ ಸ್ಥಳೀಯ ಪಂಚಾಯಿತಿ ಮೂಲಕ ಇಬ್ಬರನ್ನ ಬೇರೆ ಬೇರೆ ಮಾಡಿದ್ದಾರೆ. ಅಲ್ಲದೇ ಸುಧಾಕರ್‌ಗೆ ಬೆದರಿಕೆ ಕೂಡ ಹಾಕಿದ್ದಾರೆ. ಕೊನೆಗೆ ಸುಧಾಕರ್ ತನ್ನ ಪ್ರಾಣಕ್ಕೆ ಹೆದರಿ ಚೆನ್ನೈಗೆ ಓಡಿ ಹೋಗಿದ್ದಾನೆ. ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿರುವುದರಿಂದ ಬೇರೆ ದಾರಿಯಿಲ್ಲದೇ ಸುಧಾಕರ್ ಒಂದು ವಾರದ ಹಿಂದೆ ತನ್ನ ಗ್ರಾಮಕ್ಕೆ ಬಂದಿದ್ದ. ಇದೇ ವೇಳೆ ಹುಡುಗಿಯ ತಂದೆ ಮೂರ್ತಿ ಮತ್ತು ಸೋದರ ಸಂಬಂಧಿ ಸೇರಿಕೊಂಡು ಸುಧಾಕರ್‌ನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Home add -Advt

 

Related Articles

Back to top button