Politics

*ಚೆಕ್ ಬೌನ್ಸ್ ಕೇಸ್: ಮಾಜಿ ಸಚಿವ ನಾಗೇಂದ್ರ ಸೇರಿದಂತೆ ಮೂವರಿಗೆ ಶಿಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.

ಅರ್ಜಿ ವಿಚಾರಣೆ ನಡೆಸಿದ ೪೨ನೇ ಎಸಿಎಂಎಂ ನ್ಯಾಯಾಲಯ, ಚೆಕ್ ಬೌನ್ಸ್ ಕೇಸ್ ನಲ್ಲಿ 1 ಕೋಟಿ 25 ಲಕ್ಷ ದಂಡ ಪಾವತಿಸುವಂತೆ ಮಾಜಿ ಸಚಿವ ಬಿ.ನಾಗೇಂದ್ರ, ಬಿ.ಸಿ.ಇನ್ಫ್ರಾಸ್ಟ್ರಕ್ಚರ್, ಅನಿಲ್ ರಾಜಶೇಖರ್ ಚಂಡೂರು ಭಾಸ್ಕರ್ ಗೆ ಸೂಚಿಸಿದೆ. ದಂಡ ಪಾವತಿಸದಿದ್ದರೆ 1 ವರ್ಷ ಸೆರೆವಾಸ ಅನುಭವಿಸಲು ಆದೇಶ ಹೊರಡಿಸಿದೆ.

ವಿಎಸ್ ಎಲ್ ಸ್ಟೀಲ್ಸ್ ಲಿಮಿಟೆಡ್ ಮಾಜಿ ಸಚಿವ ನಾಗೇಂದ್ರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button