
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬಹು ವರ್ಷಗಳಿಂದ ಖಾಲಿ ಉಳಿದಿದ್ದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಂತೂ ಅಧ್ಯಕ್ಷರ ನೇಮಕ ಮಾಡಲಾಗಿದೆ.
ಬಿಜೆಪಿಯ ಕಾರ್ಯಕರ್ತ ಘೂಳಪ್ಪ ಹೊಸಮನಿ ನಗರಾಭಿವೃದ್ಧಿ ಪ್ರಾಧಿಕಾರಿಕ್ಕೆ ನೇಮಕವಾಗಿದ್ದಾರೆ. ಈ ಕುರಿತು ಸರಕಾರ ಆದೇಶ ಹೊರಡಿಸಿದೆ. ಘೂಳಪ್ಪ ಹೊಸಮನಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. 3 ವರ್ಷ ಇಲ್ಲವೇ ಮುಂದಿನ ಆದೇಶದವರೆಗೆ ಅವರು ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಹಿಂದಿನ ಸಮ್ಮಿಶ್ರ ಸರಕಾರದ ಅವಧಿಯಲ್ಲೂ ಬುಡಾಕ್ಕೆ ಅಧ್ಯಕ್ಷರ ನೇಮಕವಾಗಿರಲಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ