Kannada NewsKarnataka NewsLatest
ಬೃಹದಾಕಾರದ ಛತ್ರಪತಿ ಶಿವಾಜಿ ಪುತ್ಥಳಿ ಪ್ರತಿಷ್ಠಾಪನೆಗೆ ದಿನಗಣನೆ: ಪರಿಶೀಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಕೋಟೆಯ ಆವರಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಬೃಹದಾಕಾರದ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಯ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಸ್ಥಾಪನೆಗೆ ದಿನಗಣನೆ ಆರಂಭವಾಗಿದೆ.

ರಾಜಹಂಸಗಡ ಕೋಟೆಯನ್ನು ಸಮಗ್ರವಾಗಿ ಪ್ರವಾಸೋದ್ಯಮದೃಷ್ಟಿಯಿಂದ ಅಭಿವೃದ್ಧಿಪಡಿಸಲಾಗುತ್ತಿದೆ. ಅಲ್ಲಿಯೇ ಸಮಸ್ತ ಹಿಂದುಗಳ ಹೃದಯ ಸಾಮ್ರಾಟ ಛತ್ರವತಿ ಶಿವಾಜಿ ಮಹಾರಾಜರ ಪುತ್ಥಳಿಯನ್ನು ಸ್ಥಾಪಿಸಲಾಗುತ್ತದೆ. 6-7 ಲಾರಿಗಳಲ್ಲಿ ಪುತ್ಖಳಿಯನ್ನು ಸ್ಥಳಕ್ಕೆ ಕೊಂಡೊಯ್ಯಲಾಗುವುದು ಎಂದು ಹೆಬ್ಬಾಳಕರ್ ವಿವರಿಸಿದರು.
ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ ಸೇರಿದಂತೆ ಹಲವಾರು ಮುಖಂಡರು ಈ ಸಂದರ್ಭದಲ್ಲಿದ್ದರು.