Kannada NewsKarnataka NewsLatest

​ಬೃಹದಾಕಾರದ ಛತ್ರಪತಿ ಶಿವಾಜಿ ಪುತ್ಥಳಿ ಪ್ರತಿಷ್ಠಾಪನೆಗೆ ದಿನಗಣನೆ: ಪರಿಶೀಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ​ಬೆಳಗಾವಿ – ​ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಕೋಟೆಯ ಆವರಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಬೃಹದಾಕಾರದ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಯ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಸ್ಥಾಪನೆಗೆ ದಿನಗಣನೆ ಆರಂಭವಾಗಿದೆ.
ಪುತ್ಥಳಿ ನಿರ್ಮಾಣ ಕಾರ್ಯವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಖುದ್ದಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತೀ ಶೀಘ್ರದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರ್ವ ಮುಖಂಡರ ಸಭೆಯನ್ನು ಕರೆದು ಮೂರ್ತಿ ಪ್ರತಿಷ್ಠಾಪನೆಯ ದಿನಾಂಕವನ್ನು ನಿಗದಿಪಡಿಸಲಾಗುವುದು. ಹಿಂದೂ ಸಂಸ್ಕ್ರತಿ, ಸಂಪ್ರದಾಯದಂತೆ ಶಿವಾಜಿ ಪುತ್ಥಳಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದು ತಿಳಿಸಿದರು.
ರಾಜಹಂಸಗಡ ಕೋಟೆಯನ್ನು ಸಮಗ್ರವಾಗಿ ಪ್ರವಾಸೋದ್ಯಮದೃಷ್ಟಿಯಿಂದ ಅಭಿವೃದ್ಧಿಪಡಿಸಲಾಗುತ್ತಿದೆ. ಅಲ್ಲಿಯೇ ಸಮಸ್ತ ಹಿಂದುಗಳ ಹೃದಯ ಸಾಮ್ರಾಟ ಛತ್ರವತಿ ಶಿವಾಜಿ ಮಹಾರಾಜರ ಪುತ್ಥಳಿಯನ್ನು ಸ್ಥಾಪಿಸಲಾಗುತ್ತದೆ.  6-7 ಲಾರಿಗಳಲ್ಲಿ ಪುತ್ಖಳಿಯನ್ನು ಸ್ಥಳಕ್ಕೆ ಕೊಂಡೊಯ್ಯಲಾಗುವುದು ಎಂದು ಹೆಬ್ಬಾಳಕರ್ ವಿವರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button