ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತಂದೆ ನಂದಕುಮಾರ್ ಬಘೇಲ್ ರನ್ನು ಪೊಲೀಸರು ಬಂಧಿಸಿದ್ದಾರೆ.
ಬ್ರಾಹ್ಮಣರು ವಿದೇಶಿಗರು, ಅವರನ್ನು ಹತ್ತಿರ ಸೇರಿಸಬಾರದು, ಬ್ರಾಹ್ಮಣರನ್ನು ಬಹಿಷ್ಕರಿಸಬೇಕು ಎಂದು ನಂದಕುಮಾರ್ ಬಘೇಲ್ ಜನರಿಗೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಬ್ರಾಹ್ಮಣ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರು. ನಂದಕುಮಾರ್ ವಿರುದ್ಧ ಡಿಡಿ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.
ಈ ನಡಡು ತಮ್ಮ ತಂದೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಭೂಪೇಶ್, ರಾಜ್ಯದಲ್ಲಿ ಸಮುದಾಯಗಳ ನಡುವೆ ಸಾಮರಸ್ಯ ಕಾಪಾಡುವ ಜವಾಬ್ದಾರಿ ಜವಾಬ್ದಾರಿ ನನ್ನ ಮೇಲಿದೆ. ಹೀಗಿರುವಾಗ ನನ್ನ ತಂದೆಯೇ ಇಂತಹ ಹೇಳಿಕೆ ನೀಡಿರುವುದು ತಪ್ಪು, ಖಂಡನೀಯ. ಈ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದರು.
ಸಿಎಂ ಹೇಳಿಕೆ ಬೆನ್ನಲ್ಲೇ ಇದೀಗ ರಾಯಪುರ ಪೊಲೀಸರು ದೆಹಲಿಯಲ್ಲಿ ನಂದಕುಮಾರ್ ಬಘೇಲ್ ರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಗೀಸರ್ ನಿಂದ ವಿಷಾನೀಲ ಸೋರಿಕೆ; ಸ್ನಾನಕ್ಕೆ ಹೋಗಿದ್ದ ವಿದ್ಯಾರ್ಥಿನಿ ದಾರುಣ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ