
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತನ್ಯಾನಂದ ಸರಸ್ವತಿ ಸ್ವಾಮೀಜಿಗೆ ಸಂಕಷ್ಟ ಎದುರಾಗಿದೆ. ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.
ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ವಿದ್ಯಾರ್ಥಿಗಳು ನೀಡಿದ ದೂರುನ ಹಿನ್ನೆಯಲ್ಲಿ ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಕಾಲೇಜು ಡೀನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಕೇಸ್ ದಾಖಲಾಗುತ್ತಿದ್ದಂತೆ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸ್ವಾಮೀಜಿ ಅರ್ಜಿಯನ್ನು ವಜಾಗೊಳಿಸಿದ್ದು, ಜಾಮೀನು ನೀಡಲು ನಿರಾಕರಿಸಿದೆ.
ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಇಡಬ್ಲ್ಯು ಎಸ್ ಕೋಟಾದಡಿ ಕಾಲೇಜಿಗೆ ಸೇರಿದ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಸ್ಕಾಲರ್ ಶಿಪ್ ನೆಪದಲ್ಲಿ , ಮಾರ್ಕ್ಸ್ ಕಟ್ ಮಾಡುವ ಬೆದರಿಕೆ ಹಾಕಿ, ವಿದೇಶ ಪ್ರವಾಸದ ಆಫರ್ ಹೆಸರಲ್ಲಿ ಹೀಗೆ ವಿವಿಧ ರೀತಿಯಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಕಾಲೇಜಿನ ಡೀನ್ ಕೂಡ ಸ್ವಾಮೀಜಿಗೆ ಸಾಥ್ ನೀಡುತ್ತಿದ್ದರು. ಡೀನ್ ಗೆ ದೂರು ನೀಡಲು ಹೋದರೆ ಮೆಸೇಜ್ ಪ್ರತಿಕ್ರಿಯೆ ನೀಡುವಂತೆ ಹೇಳುತ್ತಿದ್ದರು. ಸಂಸ್ಥೆಯ ನೆಲಮಹಡಿಯಲ್ಲಿಯೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಸಂಸ್ಥೆಯ ಇಬ್ಬರು ಮಹಿಳಾ ಸಿಬ್ಬಂದಿಗಳು ಸ್ವಾಮೀಜಿಗೆ ಬೆಂಬಲವಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಕಿರುಕುಳಕ್ಕೊಳಗಾದ ವಿದ್ಯಾರ್ಥಿನಿಯರು ಸಂಸ್ಥೆಯಿಂದ ಹೊರಹೋಗದಂತೆ ಹಾಗೂ ಅವರ ದಾಖಲೆಗಳನ್ನು ವಶಕ್ಕೆ ಪಡೆದು ಬೆದರಿಕೆ ಹಾಕಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.