Latest

ಕೊನೆಗೂ ಚಿದಂಬರಂ ಬಂಧನ

ಕೊನೆಗೂ ಚಿದಂಬರಂ ಬಂಧನ

ನವದೆಹಲಿ –

ಕೇಂದ್ರದ ಮಾಜಿ ಹಣಕಾಸು ಸಚಿವ ಚಿದಂಬರಂ ಅವರನ್ನು ಬಂಧಿಸಲಾಗಿದೆ.

ಸಿಬಿಐ ಅಧಿಕಾರಿಗಳು ಚಿದಂಬರಂ ಅವರನ್ನು ನವದೆಹಲಿಯ ಅವರ ಮನೆಯಲ್ಲಿಯೇ ಬಂಧಿಸಿ ಕರೆದೊಯ್ದಿದ್ದಾರೆ.

ಕಳೆದ 27 ಗಂಟೆಯಿಂದ ನಾಪತ್ತೆಯಾಗಿದ್ದ ಚಿದಂಬರಂ ಇಂದು ರಾತ್ರಿ ಎಐಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮನೆಗೆ ತೆರಳಿದ್ದರು. ಅವರನ್ನು ಹಿಂಬಾಲಿಸಿ ತೆರಳಿದ್ದ ಸಿಬಿಐ ಅಧಿಕಾರಿಗಳು ಕೆಲವು ಸಮಯ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಿದರು.

ಐಎನ್ಎಕ್ಸ್ ಮೀಡಿಯಾದಿಂದ ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಬಂಧಿಸಿದಂತೆ ಚಿದಂಬರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಂಧನ ತಪ್ಪಿಸಿಕೊಳ್ಳಲು ಚಿದಂಬರಂ ನಿರೀಕ್ಷಣಾ ಜಾಮೀನಿಗೆ ಪ್ರಯತ್ನಿಸಿದ್ದರು. ಆದರೆ ಸುಪ್ರಿ ಂಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದು ತೆಗೆದುಕೊಳ್ಳದಿರುವುದರಿಂದ ಸಿಬಿಐ ಅಧಿಕಾರಿಗಳು ಅವರ ಬಂಧನಕ್ಕೆ ಜಾಲಬೀಸಿದ್ದರು.

ಇದನ್ನೂ ಓದಿ – ಪಿ.ಚಿದಂಬರಂಗೆ ಬಂಧನದ ಭೀತಿ, ನಿರೀಕ್ಷಣಾ ಜಾಮಿನು ಅರ್ಜಿ ವಜಾ

ಇದಕ್ಕೂ ಮೊದಲು ಪತ್ರಿಕಾಗೋಷ್ಠಿ ನಡೆಸಿದ ಚಿದಂಬರಂ ತಾವು ಪ್ರಕರಣದಲ್ಲಿ ಆರೋಪಿಯೂ ಇಲ್ಲ. ತಮ್ಮ ವಿರುದ್ಧ ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿಲ್ಲ ಎಂದಿದ್ದರು.

ಈ ಪ್ರಕರಣದಲ್ಲಿ ಚಿದಂಬರಂ ಪುತ್ರ ಕಾರ್ತಿ ಕೂಡ ಆರೋಪಿಯಾಗಿದ್ದಾರೆ.

ಇದೀಗ ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಸಿಬಿಐ ಕೇಂದ್ರ ಕಚೇರಿಗೆ ಕರೆದೊಯ್ದಿದ್ದಾರೆ. ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಕೇಂದ್ರದ ಬಿಜೆಪಿ ಸರಕಾರ ಉದ್ದೇಶಪೂರ್ವಕವಾಗಿ ದ್ವೇಷದ ರಾಜಕಾರಣ ಮಾಡುತ್ತಿದೆ. ಇದಕ್ಕಾಗಿ ಸಿಬಿಐಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎಐಸಿಸಿ ಮುಖಂಡರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button