Kannada NewsKarnataka NewsLatest
ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಕೇಳಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಸಾವು ಪ್ರಕರಣ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.
ಧಡಾರ್ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ ಅವರಿಂದ ವಿವರವಾದ ವರದಿ ಕೇಳಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
ವ್ಯಾಕ್ಸಿನ್ ಹೊಟೆಲ್ ಪ್ರಿಡ್ಜ್ ನಲ್ಲಿಟ್ಟುಕೊಂಡಿದ್ದ ನರ್ಸ್!
ಎಎನ್ಎಂ , ಫಾರ್ಮಾಸಿಸ್ಟ್ ಸಸ್ಪೆಂಡ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ